Manufacturer: Rev.Fr.Jerry Sequeira
1. ಬನ್ನಿರಿ ಕೇಳಿರಿ (Rom 10:15-17)
“ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ. ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ. ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ. (ರೋಮನರಿಗೆ ಬರೆದ ಪತ್ರ: ಹತ್ತನೆಯ ಅಧ್ಯಾಯ, ಹದಿನೈದರಿಂದ ಹದಿನೇಳು ವಾಕ್ಯಗಳು)
2. ಯೇಸುವೇ ಬಾರೋ (Psalms 130:5-6)
“ಪ್ರಭುವಿಗಾಗಿ ಎನ್ನ ಮನ ಕಾದಿದೆ | ಆತನ ವಾಕ್ಯದಲಿ ನಂಬಿಕೆ ನನಗಿದೆ || ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ | ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ | ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ ||” (ಕೀರ್ತನೆಗಳು: ನೂರ ಮೂವತ್ತನೆಯ ಅಧ್ಯಾಯ, ವಾಕ್ಯಗಳು ಐದು ಆರು)
3. ಬಾರೋ ಬಾರೋ (Mat 11:28-29)
“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು. (ಮತ್ತಾಯನ ಸುವರ್ತೆ: ಹನ್ನೊಂದನೆಯ ಅಧ್ಯಾಯ, ವಾಕ್ಯಗಳು ಇಪ್ಪತ್ತೆಂಟ್ಟು, ಇಪ್ಪತ್ತೊಂಬತ್ತು)
4. ಪರಿಶುದ್ಧ ಆತ್ಮನೇ (Rom 8:14-15)
ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು. ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ. (ರೋಮನರಿಗೆ ಬರೆದ ಪತ್ರ: ಎಂಟನೆಯ ಅಧ್ಯಾಯ, ವಾಕ್ಯಗಳು ಹದಿನಾಲ್ಕು ಹದಿನೈದು)
5. ನಾ ಹೃದಯ (1 Cor 6:19-20)
“ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ. ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.” (ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರ: ಆರನೆಯ ಅಧ್ಯಾಯ, ಹತ್ತೊಂಬತ್ತು ಇಪ್ಪತ್ತು ವಾಕ್ಯಗಳು)
6. ಯೇಸಯ್ಯಾ ಬಾರೊ (Psalms 18:1-2)
“ಪ್ರಭುವೇ, ನೀನೆ ನನ್ನ ಬಲವು | ನನಗಿದೆ ನಿನ್ನಲೇ ಒಲವು || ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ | ಆತನೇ ನನ್ನ ದೇವ, ನನ್ನಾಶ್ರಯ ದುರ್ಗ | ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ ||” (ಕೀರ್ತನೆಗಳು: ಹದಿನೆಂಟನೆಯ ಅಧ್ಯಾಯ, ವಾಕ್ಯಗಳು ಒಂದರಿಂದ ಎರಡು)
7. ಯೇಸು ನನ್ನ ದೇವಾ (1 John 5:20)
“ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.” (ಯೊವಾನ್ನನು ಬರೆದ ಮೊದಲನೆಯ ಪತ್ರ: ಐದನೆಯ ಅಧ್ಯಾಯ, ಇಪ್ಪತ್ತು ವಾಕ್ಯ)
8. ಇಳಿದು ಬಾರಯ್ಯಾ (John 15:7-8)
“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.” (ಯೊವಾನ್ನನ ಸುವರ್ತೆ: ಹದಿನೈದನೆಯ ಅಧ್ಯಾಯ, ವಾಕ್ಯಗಳು ಏಳರಿಂದ ಎಂಟು)
9. ಯೇಸು ನನ್ನ ಕರೆದಿರುವೆ (John 15:16)
“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. (ಯೊವಾನ್ನನ ಸುವರ್ತೆ: ಹದಿನೈದನೆಯ ಅಧ್ಯಾಯ, ಹದಿನಾರನೆ ವಾಕ್ಯ)
10. ನಿನ್ನ ಬಿಟ್ಟು ಎಲ್ಲಿ ಹೋಗಲಿ (John 6:67-69)
ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದರು. ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ. ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು. (ಯೊವಾನ್ನನ ಸುವರ್ತೆ: ಆರನೆ ಅಧ್ಯಾಯ, ವಾಕ್ಯಗಳು ಆರುವತ್ತ ಏಳರಿಂದ ಆರುವತ್ತ ಒಂಭತ್ತು)
| Product Price | ₹ 100.00 |








